5 ಗ್ಯಾರಂಟಿ ಜಾರಿ ಮಾಡದಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಕೋನರೆಡ್ಡಿ

5 ಗ್ಯಾರಂಟಿ ಜಾರಿ ಮಾಡದಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಕೋನರೆಡ್ಡಿ

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆಯ ಮುಂಚೆಯೇ 5 ಗ್ಯಾರಂಟಿಗಳನ್ನು ಘೋಷಿಸಿರುವುದು ನಮಗೆಲ್ಲರಿಗೂ ಗೊತ್ತಿರುವ ವಿಷಯ. ಕಾಂಗ್ರೆಸ್ ಸರ್ಕಾರವು ಆಡಳಿತದಲ್ಲಿದ್ದು ಐದು ಗ್ಯಾರಂಟಿಗಳನ್ನು ಸದ್ಯದಲ್ಲೇ ಪೂರೈಸುತ್ತದೆ. 5 ಗ್ಯಾರಂಟಿಗಳನ್ನು ಪೂರೈಸಿದೆ ಇದ್ದರೆ ನಾನು ರಾಜಕೀಯ ನಿವೃತ್ತಿಯನ್ನು ಘೋಷಿಸುತ್ತೇನೆ ಕಾಂಗ್ರೆಸ್​ ಶಾಸಕ ಕೋನರೆಡ್ಡಿ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಕೋನರೆಡ್ಡಿ, ಮುಖ್ಯಮಂತ್ರಿ, ಡಿಸಿಎಂ ಸಭೆಯಲ್ಲಿ ನಾನು ಕೂಡ ಪಾಲ್ಗೊಂಡಿದ್ದೆ. ಸಭೆಯಲ್ಲಿ ಐದು ಗ್ಯಾರಂಟಿಗಳನ್ನು ಜಾರಿ ಮಾಡ್ತೀವಿ ಎಂದಿದ್ದಾರೆ. ಒಂದುವೇಳೆ ಜಾರಿ ಮಾಡದಿದ್ರೆ ರಾಜಕೀಯ ನಿವೃತ್ತಿ ಪಡೆಯುವೆ ಎಂದು ಶಾಸಕ ಕೋನರೆಡ್ಡಿ ಶಪಥ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ 5 ಗ್ಯಾರಂಟಿಗಳನ್ನು ಘೋಷಿಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿತ್ತು. ಆದರೆ ಸರ್ಕಾರ ಬಂದು 2 ವಾರ ಕಳೆದರೂ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದು ವಿರೋಧ ಪಕ್ಷದ ನಾಯಕರು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಹೀಗಾಗಿ ಈ ಬಗ್ಗೆ ಮಾತನಾಡಿದ ಕೋನರೆಡ್ಡಿಯವರು ನಿವೃತ್ತಿಯ ಮಾತುಗಳನ್ನಾಡಿದ್ದಾರೆ. ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

Related