ಮಾಜಿ ಸಿಎಂನ ಪೊಲೀಸರು ಇಂದೇ ಬಂಧಿಸ್ತಾರ..?

ಮಾಜಿ ಸಿಎಂನ ಪೊಲೀಸರು ಇಂದೇ ಬಂಧಿಸ್ತಾರ..?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನ ಭೀತಿ ಎದುರಾಗಿದೆ. ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು ಕೂಡ ಬಿ ಎಸ್ ಯಡಿಯೂರಪ್ಪ ಅವರು ವಿಚಾರಣೆ ಹಾಜರಾಗಿಲ್ಲದ ಪರಿಣಾಮ ಇಂದೇ (ಜೂನ್ 13 ಗುರುವಾರ) ರಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ಪೊಲೀಸ ಅಧಿಕಾರಿಗಳು ಎಲ್ಲಾ ರೀತಿ ತಯಾರಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೀಗ ತಿಳಿದು ಬಂದಿದೆ.

ಹೌದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ವಿಚಾರಣೆಗೆ ಬಿಎಸ್ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ವಾರಂಟ್ ಹೊರಡಿಸುವ ಬಗ್ಗೆ ಬೆಂಗಳೂರಿನ 42ನೇ ಜ

ನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಲಿದೆ. ಬಿಎಸ್ ಯಡಿಯೂರಪ್ಪನವರನ್ನು ಬಂಧಿಸಲಿದ್ದಾರೆ.
ಇನ್ನು ಮತ್ತೊಂದೆಡೆ ತನಿಖೆಗೆ ಹಾಜರಾಗುವಂತೆ ಪೊಲೀಸರು ನೀಡಿದ್ದ ನೋಟಿಸ್ಗೆ ಬಿಎಂ ಯಡಿಯೂರಪ್ಪ ಉತ್ತರಿಸಿದ್ದಾರೆ. ನಾನು ಕಳೆದ ಮಾರ್ಚ್ 28 ರಂದು ನೀಡಿದ್ದ ನೋಟಿಸ್ ನಂತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಆದರೆ ಮತ್ತೆ ಜೂನ್ 12 ರಂದು ತಾವು ನೀಡಿರುವ ನೋಟಿಸ್ ನನಗೆ ನಿನ್ನೆಯಷ್ಟೇ ತಲುಪಿದೆ. ನಾನು ಪಕ್ಷದ ಪೂರ್ವ ನಿರ್ಧರಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ನಾನು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ನಾನು ಜೂನ್ 17 ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ. ಈ ಹಿಂದೆಯೂ ನಾನು ತನಿಖೆಗೆ ಸಹಕರಿಸಿದ್ದೇನೆ. ಸಕಾರಣಗಳಿಂದಲೇ ಈ ಬಾರಿ ತನಿಖೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯಿತಿ ನೀಡಬೇಕು ಎಂದು ತಿಳಿಸಿದ್ದಾರೆ.

Related