ಗೀತಾರನ್ನು ಬಹುಮತದಿಂದ ಗೆಲ್ಲಿಸಿ: ಮಧು ಬಂಗಾರಪ್ಪ

ಗೀತಾರನ್ನು ಬಹುಮತದಿಂದ ಗೆಲ್ಲಿಸಿ: ಮಧು ಬಂಗಾರಪ್ಪ

ಸೊರಬ: ಕರ್ನಾಟಕ ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಎಲ್ಲೆಡೆ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರವಾಗಿ ಸಚಿವ ಮಧು ಬಂಗಾರಪ್ಪ ಅವರು ಬೃಹತ್ ಮತಯಾಚನೆಯನ್ನು ನಡೆಸಿದ್ದಾರೆ.

ಮತ ಯಾಚನೆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು ತೀರಿಸಲು ಗೀತಾ ಅವರನ್ನು ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಕರೆ ನೀಡಿದರು.

ಇದ್ದನ್ನೂ ಓದಿ: ಎಸ್ ಐ ಟಿ ತಂಡದಿಂದ ಹೆಚ್. ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು

ಗೀತಾ ಅವರನ್ನು ಸೊರಬ ಕ್ಷೇತ್ರದ ಜನತೆ ಸುಮಾರು 75 ಸಾವಿರ ಮತಗಳ ಅಂತರದಿಂದ ಸಂಸದರಾಗಿ ಆಯ್ಕೆ ಮಾಡಿದರೆ ಕೇಂದ್ರದಲ್ಲಿ ಈ ಬಗ್ಗೆ ಧ್ವನಿ ಎತ್ತಲಿದ್ದಾರೆ. ಜೊತೆಗೆ ತಮಗೂ ಸಹ ಶಕ್ತಿ ದೊರೆಯಲಿದೆ ಎಂದ ಅವರು, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವಾಗಿ ಹಗುರವಾಗಿ ಮಾತನಾಡುವವರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಾರೆ. ಈಗಾಗಲೇ ಅವರು ಸೋತು ಸುಣ್ಣವಾಗಿದ್ದಾರೆ ಎಂದು ಲೇವಡಿ ಮಾಡಿದರು.

 

 

Related