ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

ಕೆಂಭಾವಿ : ಮಾನವನ ಅಸ್ತಿತ್ವವು ಪ್ರಕೃತಿಯ ಮೇಲೆ ಅವಲಂಭಿತವಾಗಿದೆ. ಆದ್ದರಿಂದ ಆರೋಗ್ಯಕರ ಮತ್ತು ಸುರಕ್ಷಿತ ಪರಿಸರವಿಲ್ಲದೆ ಮಾನವ ಸಮಾಜದ ಪರಿಕಲ್ಪನೆಯೂ ಕೂಡ ಅಪೂರ್ಣ ಎಂದು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ ಕುಲಕರ್ಣಿ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಕೊರೋನಾ ಸಂದರ್ಭದಲ್ಲಿ ಆಕ್ಸಿಜನ್ ಕೊರೊತೆಯಿಂದ ಎಷ್ಟೋ ಜನ ಅಮೂಲ್ಯವಾದ ಪ್ರಾಣ ಕಳೆದುಕೊಂಡಿದ್ದಾರೆ. ಇದು ಮಾನವ ಸಂಕುಲಕ್ಕೆ ಒಂದು ಎಚ್ಚರಿಕೆ. ನಾವು ಹೆಚ್ಚು ಮರಗಳನ್ನು ನೆಡುವುದರಿಂದ ಪರಿಸರದಲ್ಲಿ ಆಕ್ಸಿಜನ್ ಪ್ರಮಾಣ ಹೆಚ್ಚುತ್ತದೆ. ಪರಿಸರ ಮಾನವನಿಗೆ ಉಚಿತವಾಗಿ ಆಕ್ಸಿಜನ್ ನೀಡುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಹಸಿರು ಬೆಳೆಸಿ ಉಳಿಸುವಲ್ಲಿ ಪ್ರಯತ್ನಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ಶರತ, ಪಿಎಸ್‌ಐ ಗಜಾನನ, ಜೆಸ್ಕಾಂ ಇಂಜನಿಯರ್ ಶ್ರೀಶೈಲ್ ಸೇರಿದಂತೆ ಆರೋಗ್ಯ ಕೇಂದ್ರದ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಜೆಸ್ಕಾಂ ಸಿಬ್ಬಂದಿ ಹಾಜರಿದ್ದರು.

ವರದಿಗಾರ ಗಿರೀಶ್ ಬ್ಯಾಕೋಡ್

Related