ಯಾದಗಿರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ನೀಡಿ: ವಿ ಸೋಮಣ್ಣ

ಯಾದಗಿರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ನೀಡಿ: ವಿ ಸೋಮಣ್ಣ

ಯಾದಗಿರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ಆಯ್ಕೆಯಾಗಿರುವ ಯಾದಗಿರಿ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಸೂಚ್ಯಂಕದಲ್ಲಿ ಮುಂಚೂಣಿಯಲ್ಲಿ ಬರುವಂತೆ ನೋಡಿಕೊಳ್ಳಲು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ವಡಿಗೇರಾ ತಾಲೂಕಿನ ತಡಿಬಿಡಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಇಂದು ಸಂಪೂರ್ಣತಾ ಅಭಿಯಾನ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರದ 112 ಜಿಲ್ಲೆಗಳನ್ನು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಆಯ್ಕೆ ಮಾಡಿದ್ದು ಅದರಲ್ಲಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆ ಕೂಡ ಇವೆ. ಈ ಹಿನ್ನಲೆಯಲ್ಲಿ ಆರೋಗ್ಯ, ಶಿಕ್ಷಣ,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,  ಮೂಲಸೌಕರ್ಯ ಅಭಿವೃದ್ಧಿ, ಕುಡಿಯುವ ನೀರು, ಕೃಷಿ ಇಲಾಖೆ ಸೂಚ್ಯಂಕದಲ್ಲಿ ಮುಂಚೂಣಿಯಲ್ಲಿ ತರಲು ಪ್ರಯತ್ನಿಸಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ನೀಡುವಂತೆ ಅವರು ಸಲಹೆ ನೀಡಿದರು. ಇದನ್ನೂ ಓದಿ: ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಿಸಿ: ಸಿ.ಪಿ.ಐ ಅಂಬರೇಶ

ಜಿಲ್ಲೆಯಲ್ಲಿ 7 ಸಾವಿರ ಶಿಕ್ಷಕರ ಪೈಕಿ ಕೇವಲ 3 ಸಾವಿರ ಶಿಕ್ಷಕರ ಗುರಿ ತಲುಪಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ವಿನಂತಿಸುವುದಾಗಿ ತಿಳಿಸಿದ ಅವರು ತಕ್ಷಣ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಮ್ಮ ಇಲಾಖೆ ಆಯುಕ್ತರಿಗೆ ಖುದ್ದಾಗಿ ಭೇಟಿ ನೀಡಿ ಶಿಕ್ಷಕರ ಕೊರತೆ ನೀಗಿಸಲು ನನ್ನೊಂದಿಗೆ ಸಮನ್ವಯತೆ ಸಾಧಿಸಬೇಕು. ಅದರಂತೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರ ಅವಶ್ಯಕತೆ ತೀರ ಇರುವುದರಿಂದ ನೇಮಕಾತಿ ನಡೆಯುವ ಅಗತ್ಯವಿದೆ ಎಂದು ಹೇಳಿದರು.

ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವಂತಹ ಕೂಲಿಕಾರರ ಮಕ್ಕಳಿಗೆ ನೋಡಿಕೊಳ್ಳಲು ಕೂಸಿನ ಮನೆ ಸೌಲಭ್ಯ ಇಲ್ಲಿ ಇದ್ದು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಈ ಮಕ್ಕಳ ಆರೈಕೆ ನೋಡಿಕೊಳ್ಳುತ್ತಿರುವುದರಿಂದ ಅವರಿಗೆ ಕನಿಷ್ಠ ಸಂಬಳ ನಿಗದಿಪಡಿಸುವ ಅವಶ್ಯಕತೆ ಇದ್ದು ಈ ಕುರಿತಂತೆ ಕೇಂದ್ರ ಸರ್ಕಾರದ ಗಮನಕ್ಕೂ ತರಲಾಗುವುದು ಎಂದು ಹೇಳಿದರು.

ರೈತರ ಸಮಗ್ರ ಅಭಿವೃದ್ಧಿಗೆ ನೆರವಾಗುವ ದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಇಲಾಖೆಗೆ ಅವಶ್ಯಕ ಅನುದಾನ ನೀಡುತ್ತಿದೆ. ಈ ಹಿನ್ನಲೆಯಲ್ಲಿ ಪ್ರತಿ ರೈತರ ಜೀವನ ಸುಧಾರಣೆಯಾಗಬೇಕು. ರೈತಾಪಿ ಜನರ ಆರ್ಥಿಕ ಅಭಿವೃದ್ಧಿಗೆ ನೆರವಾಗಬೇಕು. ಪ್ರತಿ ರೈತರಿಗಾಗಿ ಇರುವಂತಹ ಮಣ್ಣಿನ ಸತ್ವ ಪರೀಕ್ಷೆ,  ಯೋಜನೆಗಳ ಲಾಭ ದೊರಕಿಸುವಂತೆ ಅವರು ಸಲಹೆ ನೀಡಿದರು.

 

 

Related