ಎಂ.ಜಿ ರಸ್ತೆಯಲ್ಲಿ ವರ್ಷಾಚರಣೆಗೆ ಬ್ರೇಕ್

ಎಂ.ಜಿ ರಸ್ತೆಯಲ್ಲಿ ವರ್ಷಾಚರಣೆಗೆ ಬ್ರೇಕ್

ಬೆಂಗಳೂರು : ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ ನಿರ್ಧರಿಸಿದೆ. ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಹೆಚ್ಚು ಜನ ಸೇರ್ತಾರೆ ಈ ವೇಳೆ ದೈಹಿಕ ಅಂತರ, ಮಾಸ್ಕ್ ಎಲ್ಲ ನಿಯಮ ಪಾಲನೆ ಅಸಾಧ್ಯ. ಈ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ.

ಪ್ರತಿ ವರ್ಷ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸೆಲೆಬ್ರೇಷನ್ ಜೋರಾಗಿರುತ್ತಿತ್ತು. ಜನ ಮೋಜು ಮಸ್ತಿ ಮಾಡುತ್ತ ಡಿಜೆ ಎಂಜಾಯ್ ಮಾಡುತ್ತ ಕುಣಿದು ಕುಪ್ಪಳಿಸಿ ಹೊಸ ವರ್ಷವನ್ನು ಬರ ಮಾಡಿಕೊಳ್ಳುತ್ತಿದ್ದರು. ಆದರೆ ಕೊರೊನಾದಿಂದಾಗಿ ಈ ಸೆಲೆಬ್ರೇಷನ್‌ಗೆ ಬ್ರೇಕ್ ಬೀಳಲಿದೆ. ಇನ್ನು ಮನೆಗಳಲ್ಲಿ ಸರಳವಾಗಿ ಆಚರಣೆ ಮಾಡುವಂತೆ ಪಾಲಿಕೆ ಮನವಿ ಮಾಡಿಕೊಂಡಿದೆ.

Related