ಬಿಜೆಪಿಗೆ ಮತ್ತೆ ಯಡಿಯೂರಪ್ಪ ಅನಿವಾರ್ಯ ಅಚ್ಚರಿ ಹೇಳಿಕೆ!

ಬಿಜೆಪಿಗೆ ಮತ್ತೆ ಯಡಿಯೂರಪ್ಪ ಅನಿವಾರ್ಯ ಅಚ್ಚರಿ ಹೇಳಿಕೆ!

ಕೋಲಾರ: ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನವನ್ನೂ ಗೆಲ್ಲಲು ಕೆಲಸ ಮಾಡುತ್ತೇವೆ. ಭ್ರಷ್ಟಾಚಾರ ಸರ್ಕಾರದ ವಿರುದ್ಧ ಹೋರಾಟ ಪ್ರಾರಂಭ ಮಾಡಿದ್ದೇವೆ. ಉಚಿತ ವಿದ್ಯುತ್ ಕೊಡುತ್ತೇವೆ ಅಂತಹೇಳಿ ವಿದ್ಯುತ್ ಕಡಿತ ಮಾಡ್ತಿದ್ದಾರೆ. ರಾಜ್ಯ ಸರ್ಕಾರ ರೈತರ ಹೊಟ್ಟೆ ಹೊಡೆಯುವ ಕೆಲಸ ಮಾಡುತ್ತಿದೆ. ಕದ್ದು ಮುಚ್ಚಿ ನೀರು ಬಿಡುವ ಮೂಲಕ ಕಾಂಗ್ರೆಸ್ ತನ್ನ ಬುದ್ಧಿ ತೋರಿಸಿದೆ. ಇಬ್ಬರು ಮಂತ್ರಿಗಳ ಮೇಲೆ ಕೇಸ್ ದಾಖಲಾದ್ರೂ ರಾಜೀನಾಮೆ ಪಡೆದಿಲ್ಲ. ದೂರು ನೀಡಿದವರ ಮೇಲೆಯೇ ಪ್ರಕರಣ ದಾಖಲು ಮಾಡುತ್ತಿದ್ದಾರೆ. ಎಂದು ನಳಿನ್ ಕುಮಾರ್ ಕಟೀಲ್ ಕಿಡಿಕಾರಿದರು.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಗುಂಪುಗಾರಿಕೆ ಶುರುವಾಗಿದ್ದು ಯಡಿಯೂರಪ್ಪಹಾಗೂ ಬಿಎಲ್ ಸಂತೋಷ್ ಬೆಂಬಲಿಗರ ನಡುವೆ ಬಹಿರಂಗ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ಮಧ್ಯೆ ವಿಧಾನಸಭೆ ಸೋಲಿನ ಬಳಿಕ ಎಚ್ಚೆತ್ತುಕೊಂಡಿರುವ ಹೈಕಮಾಂಡ್ ಮುಂಬರುವ ಲೋಕಸಭಾ ಚುನಾವಣೆಗೆ ಮತ್ತೆ ಯಡಿಯೂಪ್ಪನವರ ಮುಂದೆ ಬಿಡಲು ಮುಂದಾಗಿದೆ. ವಿಧಾನಸಭಾ ಸೋಲಿನಿಂದ ಚೇತರಿಸಿಕೊಳ್ಳುತ್ತಿರುವ ಬಿಜೆಪಿಗೆ ಯಡಿಯೂಪ್ಪ ಅನಿವಾರ್ಯ ಎಂಬ ಮಾತುಗಳು ಕೇಳಿ ಬಂದಿವೆ. ಇದಕ್ಕೆ ಪೂರಕವೆಂಬಂತೆ ಈಗಾಗಲೇ ಯಡಿಯೂರಪ್ಪನವರೊಂದಿಗೆ ಅಮಿತ್ ಶಾ, ನಡ್ಡಾ, ಮೋದಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಚುನಾವಣೆ ಮುಗಿದು ಮೂರು ತಿಂಗಳಾದರೂ ವಿರೋಧ ಪಕ್ಷದ ನಾಯಕನ ಆಯ್ಕೆಯೂ ಆಗಿಲ್ಲ. ಜೊತೆಗೆ ರಾಜ್ಯಾಧ್ಯಕ್ಷರ ಬದಲಾವಣೆಯೂ ಆಗದೇ ನಾಯಕತ್ವದ ಕೊರತೆಯನ್ನು ಬಿಜೆಪಿ ಎದುರಿಸುತ್ತಿದೆ. ಈ ವೇಳೆ ಬಿಎಸ್ ಯಡಿಯೂರಪ್ಪ ಮತ್ತೆ ಅಖಾಡಕ್ಕೆ ಧುಮುಕಿದ್ದಾರೆ. ಬಿಜೆಪಿಗೆ ವಲಸೆ ಬಂದ ಪ್ರಮುಖ ನಾಯಕರು ಪಕ್ಷ ತ್ಯಜಿಸದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಕೂಡ ಅವರೇ ಹೊತ್ತುಕೊಂಡಂತೆ ಕಾಣುತ್ತಿದೆ. ಕರ್ನಾಟಕದಾದ್ಯಂತ ಪ್ರವಾಸ ಮಾಡಲು ಮುಂದಾಗಿದ್ದಾರೆ. ಇದರೊಂದಿಗೆ ಕರ್ನಾಟಕ ಬಿಜೆಪಿಗೆ ಬಿಎಸ್ ಯಡಿಯೂರಪ್ಪ ಅನಿವಾರ್ಯ ಎಂಬುದು ಸ್ಪಷ್ಟವಾಗಿದೆ.

ವರದಿಗಾರ, ಕೋಲಾರ ರೆಡ್ಡಿ

Related