ಯೋಗ ಕಾಯಿಲೆಗಳಿಂದ ಮುಕ್ತಿ ನೀಡುತ್ತದೆ: ಎಚ್ ಡಿ ಕುಮಾರಸ್ವಾಮಿ

ಯೋಗ ಕಾಯಿಲೆಗಳಿಂದ ಮುಕ್ತಿ ನೀಡುತ್ತದೆ: ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಹತ್ತನೇ ವರ್ಷದ ಅಂತರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಇಂದು (ಜೂನ್ 21ರಂದು ಶುಕ್ರವಾರ) ರಂದು ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಸಚಿವಾಲಯದ ವತಿಯಿಂದ ನೋಯ್ಡಾದ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿಯ ಟೌನ್ ಶಿಪ್​ನಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು. ಇದನ್ನೂ ಓದಿ: ಜಿಂದಾಲ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಯೋಗಕ್ಕೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ. 2014ರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನ ಆಚರಿಸಲಾಗುತ್ತಿದೆ. ಮೈಸೂರಿನ ಅರಮನೆ ಮೈದಾನದಲ್ಲೂ ಮೋದಿ ಯೋಗ ಮಾಡಿದರು. ಯೋಗಕ್ಕೆ ಪ್ರಧಾನಿಗಳ ಪ್ರೊತ್ಸಾಹ ಹೆಚ್ಚು. ಇದರಿಂದಾಗಿ ಹೆಚ್ಚು ಪ್ರಚಾರ ದೊರೆತಿದೆ. ಯೋಗ ಕಾಯಿಲೆಗಳಿಂದ ಸ್ವಲ್ಪ ಮುಕ್ತಿ ನೀಡುತ್ತದೆ. ಆರೋಗ್ಯವಂತವಾಗಿರಲು ನಿತ್ಯ ಯೋಗ ಅಳವಡಿಸಿಕೊಳ್ಳಬೇಕು. ಕಾಶ್ಮೀರದಲ್ಲಿ ಮೋದಿ ಯೋಗ ಮಾಡುತ್ತಿರುವುದು ಒಳ್ಳೆಯ ಸಂದೇಶ ಎಂದು ಕುಮಾರಸ್ವಾಮಿ ಹೇಳಿದರು.

 

Related