ದೆಹಲಿ: ರಾಜ್ಯ ರಾಜಕೀಯದಲ್ಲಿ ಉಪಚುನಾವಣೆಯ ಕಾವು ಬಲು ಜೋರಾಗಿದೆ ನಡೆಯುತ್ತಿದ್ದು ಇದರ ಬೆನ್ನಲ್ಲೇ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಪಿ ಯೋಗೇಶ್ವರ್ ಅವರು ಬಾಲಮುದ್ರಿಕೊಂಡು ಮನೆಗೆ ಹೋಗುತ್ತಾರೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಸಿಪಿ ಯೋಗೇಶ್ವರ್ ಚನ್ನಪಟ್ಟಣದಿಂದ ಟಿಕೆಟ್ ಸಿಗದೇ ಹೋದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿರುವುದನ್ನು ಅವರಿಗೆ ತಿಳಿಸಿದಾಗ, ಯಾರು ಏನು ತೀರ್ಮಾನ ಮಾಡುತ್ತಾರೆ ಅಂತ ಈಗಲೇ ಹೇಗೆ ಹೇಳಲು ಸಾಧ್ಯ? ಮೊದಲೆಲ್ಲ ಹಾಗೆ ಹೇಳುತ್ತಾರೆ, ಅದರೆ ಈಡಿ, ಸಿಬಿಐ ಅಂತ ಹೆದರಿಸಿದಾಕ್ಷಣ ಬಾಲ ಮುದುರಿಕೊಂಡು ಮನೆ ಸೇರುತ್ತಾರೆ ಎಂದು ಶಿವಕುಮಾರ್ ವ್ಯಂಗ್ಯವಾಗಿ ಹೇಳಿದರು. ಇದನ್ನೂ ಓದಿ: ರಾಜ್ಯಪಾಲರಿಗೆ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು
ಒಟ್ಟಿನಲ್ಲಿ ಸಿಪಿ ಯೋಗೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪರೋಕ್ಷವಾಗಿ ಉಪಚುನಾವಣೆಯಲ್ಲಿ ಟಿಕೆಟ್ ಸಿಗದೇ ಮನೆಗೆ ಹೋಗುತ್ತಾರೆ ಎಂಬ ಮಾತನ್ನು ಹೇಳಿದ್ದಾರೆ. ಹಾಗಾದರೆ ಉಪಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಯಾರಿಗೆ ಟಿಕೆಟ್ ಸಿಗುತ್ತದೆ ಎಂಬುದು ಕುತೂಹಲ ಕೆರಳಿಸಿದೆ.