ಯುವಕ ಶವವಾಗಿ ಪತ್ತೆ

ಯುವಕ ಶವವಾಗಿ ಪತ್ತೆ

ಮೈಸೂರು, ಮಾ. 7 : ಪಾರ್ಟಿ ಮಾಡಲೆಂದು ಸ್ನೇಹಿತನ ಜೊತೆ ಮನೆ ಬಿಟ್ಟು ಹೋದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮನೋಜ್ ಕುಮಾರ್ ಮೃತ ದುರ್ದೈವಿ. ತಗಡೂರು ಗ್ರಾಮದ ನಿವಾಸಿ ಮನೋಜ್ ಕುಮಾರ್, ಗುರುವಾರ ಸಂಜೆ ಸ್ನೇಹಿತ ವಿಜಯ್ ಕುಮಾರ್ ಜೊತೆ ಬೈಕಿನಲ್ಲಿ ತೆರಳಿದ್ದ. ಇದೀಗ ನಾಲೆಯ ತೂಬಿನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಆಗ ವಿಜಯಕುಮಾರ್, ಮನೋಜ್ ಕುಮಾರ್ ಪೋಷಕರಿಗೆ ಸುದ್ದಿ ಮುಟ್ಟಿಸಿದ್ದಾನೆ. ನಾಲೆ ಬಳಿ ಹುಡುಕಾಡಿದಾಗ ಮನೋಜ್ ಶವ ಪತ್ತೆಯಾಗಿದೆ. ಮನೋಜ್ನ ಕಿವಿ, ಮರ್ಮಾಂಗ ಹಾಗೂ ಹುಬ್ಬುಗಳ ಮೇಲೆ ಗಾಯವಾಗಿದ್ದು, ಪೋಷಕರು ಕೊಲೆ ಆರೋಪದ ದೂರು ದಾಖಲಿಸಿದ್ದಾರೆ.
ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

Related