ಯುವ ಶ್ರೀದೇವಿ ವಿಚ್ಛೇದನ ಪ್ರಕರಣ; ವಿಚಾರಣೆ ಮುಂದೂಡಿದ ಕೋರ್ಟ್

ಯುವ ಶ್ರೀದೇವಿ ವಿಚ್ಛೇದನ ಪ್ರಕರಣ; ವಿಚಾರಣೆ ಮುಂದೂಡಿದ ಕೋರ್ಟ್

ಬೆಂಗಳೂರು: ಡಾ. ರಾಜಕುಮಾರ್ ಅವರ ಕುಟುಂಬದ ಕುಡಿ ನ್ಯಾಯಾಲಯದ ಮೆಟ್ಟಿಲೇರಿದ್ದು, ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವರಾಜ್ ಕುಮಾರ್ ಅವರು ತಮ್ಮ ಪತ್ನಿ ಶ್ರೀದೇವಿ ಅವರಿಗೆ ವಿಚ್ಛೇದನ ಕುರಿತಂತೆ ಈಗಾಗಲೇ ಕೌಟುಂಬಿಕ ನ್ಯಾಯಾಲಯಕ್ಕೆ ವಿಚ್ಛೇದನ ಅರ್ಜಿಯನ್ನು ಸಲ್ಲಿಸಿದ್ದಾರೆ.

ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದ ವಿವಾದಗಳು ನಡೆಯುತ್ತಿದ್ದು, ಪತ್ನಿ ಶ್ರೀದೇವಿಯವರು ವಿಚ್ಛೇದನಕೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಇಂದು ವಿಚ್ಛೇದನ ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿದ್ದು, ಮುಂದಿನ ವಿಚಾರಣೆಯನ್ನು‌ ಆಗಸ್ಟ್ 23 ಕ್ಕೆ ಮುಂದೂಡಲಾಗಿದೆ. ಇದನ್ನೂ ಓದಿ: ಡಿ ಗ್ಯಾಂಗ್ ಗೆ ಮತ್ತಷ್ಟು ಸಂಕಷ್ಟ

ಯುವ ರಾಜ್ ಕುಮಾರ್ ಸಲ್ಲಿಸಿರುವ ವಿಚ್ಛೇದನಕ್ಕೆ ಶ್ರೀದೇವಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಆಕ್ಷೇಪಣೆ ಬಗ್ಗೆ ವಾದ ಮಂಡಿಸಲು ಶ್ರೀದೇವಿ ಪರ ವಕೀಲರು ಅವಕಾಶ ಕೇಳಿದರು. ಇದಕ್ಕೆ ಅವಕಾಶ ನೀಡದ ನ್ಯಾಯಾಧೀಶರು, ಇದು ಕೌಟುಂಬಿಕ ಕಲಹವಾದ್ದರಿಂದ ಮೊದಲು ಕೌನ್ಸಲಿಂಗ್ ಆಗಬೇಕು. ಕೌನ್ಸಲಿಂಗ್ ಮುಕ್ತಾಯದ ಬಳಿಕ ಇಬ್ಬರ ತೀರ್ಮಾನ ಕೇಳಬೇಕು. ಮೀಡಿಯೇಟರ್ ಕೌನ್ಸಲಿಂಗ್ ನಡೆದ ಬಳಿಕವಷ್ಟೆ ಪ್ರಕರಣದ ಮುಂದಿನ ಹಂತಕ್ಕೆ ಅವಕಾಶ ನೀಡಲಾಗುತ್ತದೆ ಎಂದುನ್ಯಾಯಾಧೀಶೆ ಕಲ್ಪನಾ ಹೇಳಿದ್ದಾರೆ.

 

Related