ಯುವನಿಧಿ ಯೋಜನೆ ನಿರುದ್ಯೋಗಿಗಳಿಗೆ ಬೂಸ್ಟರ್ ಡೋಸ್ ಇದ್ದಂತೆ: ಪರಂ

ಯುವನಿಧಿ ಯೋಜನೆ ನಿರುದ್ಯೋಗಿಗಳಿಗೆ ಬೂಸ್ಟರ್ ಡೋಸ್ ಇದ್ದಂತೆ: ಪರಂ

ತುಮಕೂರು: ಕಾಂಗ್ರೆಸ್ ಸರ್ಕಾರದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗ ಯುವಕ ಯುವತಿಯರಿಗೆ ಬೂಸ್ಟರ್ ಡೋಸ್ ಇದ್ದಂತೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಯುವನಿಧಿ ಯೋಜನೆಯು ಇದೇ ಜನವರಿ 12ನೇ ತಾರೀಖಿನಿಂದ ನಿರುದ್ಯೋಗ ಯುವಕ ಯುವತಿಯರಿಗೆ ನೇರವಾಗಿ ಅವರ ಖಾತೆಗೆ ಜಮಾ ಆಗಲಿದ್ದು ಬೇಕಾದ ದಾಖಲೆಗಳೊಂದಿಗೆ ಅರ್ಜಿಗಳನ್ನು ನೋಂದಾಯಿಸಬೇಕೆಂದು ಹೇಳಿದರು.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಅದರಂತೆ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಸೇರಿದಂತೆ 4 ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದು, 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಬೆಂಗಳೂರಿನಲ್ಲ ಮಂಗಳವಾರ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪದವಿ ಉತ್ತೀರ್ಣರಾದ ಲಕ್ಷಾಂತರ ನಿರುದ್ಯೋಗಿಗಳು ಇರುವುದನ್ನು ಮನಗಂಡ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು.

 

Related