ಜಮೀರ್ ಅಹಮ್ಮದ್​ ಆಸ್ಪತ್ರೆಗೆ ದಾಖಲು

ಜಮೀರ್ ಅಹಮ್ಮದ್​ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಚಿತ್ರದುರ್ಗದಲ್ಲಿ ಪ್ರಚಾರದ ಸಂದರ್ಭದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇಂದು (ಏಪ್ರಿಲ್ 15) ಸಂಜೆ ನಾಲ್ಕು ಗಂಟೆ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು. ಈ ವೇಳೆ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ  ಜಮೀರ್ ಅಹಮ್ಮದ್ ಖಾನ್ ಅವರನ್ನು ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೃದ್ರೋಗ ತಜ್ಞ ಕಾರ್ತಿಕ್‌ ಅವರು ಜಮೀರ್ ಅಹಮ್ಮದ್ ಖಾನ್ ಅವರ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಿದ್ದು, ಅದೃಷ್ಟವಶಾತ್ ಅಂತಹ ಗಂಭೀರವಾಗಿ ಏನು ಆಗಿಲ್ಲ ಎಂದು ತಿಳಿದುಬಂದಿದೆ. ಎಲ್ಲಾ ಪರೀಕ್ಷೆಯಲ್ಲಿ ನಾಮರ್ಲ್​ ಎಂದು ಬಂದಿದೆ. ಹೀಗಾಗಿ ಜಮೀರ್ ಅಹಮ್ಮದ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

 

Related